ದುಬೈ:ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕ್ರಿಕೆಟ್ ಸಮಾರಾ ವೀಕ್ಷಿಸದೆ ಬಹಳ ದಿನ ಕಳೆದಿದೆ. ಈ ಬಾರಿಯ ಏಷ್ಯಾ ಕಪ್ ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿವೆ
ಸೆ. ೧೯ ರಂದು ನಡೆಯುವ ಪಂದ್ಯದಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ ಎಂದು ಐಸಿಸಿ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ತಿಳಿಸಿದೆ.
ಎರಡು ವರ್ಷಕ್ಕೊಮ್ಮೆ ನಡೆಯಲಿರುವ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿವೆ. ಸೆ.೧೫ರಿಂದ ೨೮ರವರೆಗೆ ಈ ಟೂರ್ನಿ ನಡೆಯಲಿದೆ ಎಂದು ಐಸಿಸಿ ತಿಳಿಸಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫಘಾನಿಸ್ತಾನ ಟೂರ್ನಿಯಲ್ಲಿ ಪಾಲ್ಗೊಳ್ಳುವುದನ್ನು ಈಗಾಗಲೇ ಖಚಿತಪಡಿಸಿವೆ. ಆದರೆ ಉಳಿದ ಏಕೈಕ ಸ್ಥಾನಕ್ಕೆ ಆತಿಥೇಯ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ), ಸಿಂಗಾಪುರ, ಓಮನ್, ನೇಪಾಳ, ಮಲೇಷ್ಯಾ ಮತ್ತು ಹಾಂಕಾಂಗ್ ಪೈಪೋಟಿ ನಡೆಸುತ್ತಿವೆ.