ದುಬೈ:
ನ್ಯೂಜಿಲೆಂಡ್ ವಿರುದ್ಧ ಭಾನುವಾರ ನಡೆದ ಅಂತಿಮ ಟಿ-20 ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬಾಬರ್ ಅಜಾಮ್ 58 ಎಸೆತಗಳಿಗೆ 79 ರನ್ ಗಳಿಸುವ ಮೂಲಕ ಪ್ರಸಕ್ತ ವರ್ಷದಲ್ಲಿ ವೇಗವಾಗಿ 1000 ರನ್ ಪೂರೈಸಿದರು. ಇದರೊಂದಿಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಹಿಂದಿಕ್ಕಿದರು.
ಈ ಪಂದ್ಯದಲ್ಲಿ ಪಾಕಿಸ್ತಾನ ಮೊದಲ ಇನಿಂಗ್ಸ್ ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತ್ತು.
ಟೀಂ ಇಂಡಿಯಾ ನಾಯಕ ಕೊಹ್ಲಿ ಚುಟುಕು ಕ್ರಿಕೆಟ್ ನಲ್ಲಿ 27 ಇನಿಂಗ್ಸ್‍ಗಳಲ್ಲಿ ಸಾವಿರ ರನ್ ಕಲೆಹಾಕಿದ್ದರು. ಆದರೆ, ಪಾಕಿಸ್ತಾನದ ಆಟಗಾರ 26 ಇನಿಂಗ್ಸ್ ಗಳಲ್ಲಿ ಸಾವಿರ ರನ್ ಪೂರೈಸುವ ಮೂಲಕ ನೂತನ ದಾಖಲೆ ನಿರ್ಮಿಸಿದರು