ಬೆಂಗಳೂರು: ಹರಿಯಾಣದ ಭಿವಾನಿಯಲ್ಲಿ ನಡೆಯುತ್ತಿರುವ 27ನೇ ರಾಷ್ಟ್ರೀಯ ಸಬ್ ಜೂನಿಯರ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಬಾಲಕಿಯರ ತಂಡ ಉತ್ತಮ ಪ್ರದರ್ಶನ ತೋರಿ ಫೈನಲ್ ತಲುಪಿದೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಲಕರ ತಂಡ ಕೇರಳ ವಿರುದ್ಧ 26-22 ಅಂಕಗಳ ಅಂತರದಲ್ಲಿ ಜಯ ಗಳಿಸಿ ಸೆಮಿಫೈನಲ್ ಪ್ರವೇಶಿಸಿತು.
ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಬಾಲಕರ ತಂಡ ಜಾರ್ಖಂಡ್ ವಿರುದ್ಧ 28-30 ಅಂತರದಲ್ಲಿ ಸೋಲನುಭವಿಸಿದ್ದು, ಭಾನುವಾರ ಮೂರನೇ ಸ್ಥಾನಕ್ಕಾಗಿ ಹೋರಾಟ ನಡೆಸಲಿದೆ,
ಬಾಲಕರಿಯರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಕೇರಳ ವಿರುದ್ಧ 24-21 ಅಂತರದಲ್ಲಿ ಜಯ ಗಳಿಸಿ ಸೆಮಿಫೈನಲ್ ಪ್ರವೇಶಿಸಿತು. ಸೆಮಿಫೈನಲ್ ಪಂದ್ಯದಲ್ಲಿ ರಾಜ್ಯದ ಬಾಲಕಿಯರ ತಂಡ ಪಶ್ಚಿಮ ಬಂಗಾಳ ವಿರುದ್ಧ 24-11 ಅಂತರದಲ್ಲಿ ಜಯ ಗಳಿಸಿ ಫೈನಲ್ ಪ್ರವೇಶಿಸಿದ್ದು, ಫೈನಲ್ ಪಂದ್ಯ ಭಾನುವಾರ ನಡೆಯಲಿದೆ.