Friday, November 22, 2024

ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನೇ ಅಮಾನತುಗೊಳಿಸಿದ ಐಸಿಸಿ

ಕೊಲಂಬೋ: ಶ್ರೀಲಂಕಾ ಕ್ರಿಕೆಟ್‌ ಸಂಸ್ಥೆಯ ಆಡಳಿತದಲ್ಲಿ ಅಲ್ಲಿಯ ಸರಕಾರ ನಿರಂತರವಾಗಿ ಹಸ್ತಕ್ಷೇಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ICC) ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನು ಈ ಕೂಡಲೇ ಜಾರಿಯಾಗುವಂತೆ ಅಮಾನತುಗೊಳಿಸಿದೆ. Sri Lanka Cricket Board suspended by ICC.

“ಇಂದು ನಡೆದ ಐಸಿಸಿ ಸಭೆಯಲ್ಲಿ ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಐಸಿಸಿಯ ನಿಯಮಗಳನ್ನು ಉಲ್ಲಂಘಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ. ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಒಂದು ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸದೆ ಸರಕಾರದ ಆದೇಶದಂತೆ ಕೆಲಸ ಮಾಡುತ್ತಿದೆ.

ಐಸಿಸಿ ಮೂರು ತಿಂಗಳಿಗೊಮ್ಮೆ ನಡೆಯವು ಸಭೆ ನವೆಂಬರ್‌ 18-21 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿದೆ. ಶ್ರೀಲಂಕಾದ ಕ್ರಿಕೆಟ್‌ ಪರಿಸ್ಥಿತಿಯ ಬಗ್ಗೆ ತೀರ್ಮನಾ ಕೈಗೊಳ್ಳಲು ಶುಕ್ರವಾರ ಆನ್‌ಲೈನ್‌ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಶ್ರೀಲಂಕಾ ಸರಕಾರ ಅಲ್ಲಿಯ ಕ್ರಿಕೆಟ್‌ ಮಂಡಳಿಯ ಆಡಳಿತ, ಹಣಕಾಸು ಹಾಗೂ ತಂಡದ ವಿಷಯದಲ್ಲೂ ಸಂಪೂರ್ಣ ಹಸ್ತಕ್ಷೇಪ ಮಾಡುತ್ತಿರುವುದು ಬೆಳಕಿಗೆ ಬಂತು. ಇದು ಐಸಿಸಿಯ ಸಂವಿಧಾನಕ್ಕೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಈ ತೀರ್ಮಾನವನ್ನು ಕೈಗೊಂಡಿದೆ.

Related Articles