Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಮಂಗಳೂರು ವಿವಿ ಕುಸ್ತಿ: ಆಳ್ವಾಸ್‌ಗೆ ಸತತ 14 ನೇಬಾರಿಸಮಗ್ರ ಪ್ರಶಸ್ತಿ


ಮೂಡುಬಿದಿರೆ
: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ  ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ  02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ. Alvas College Moodubidire won Mangalore University Inter College wrestling championship for consecutive 14th time.
ಫಲಿತಾಂಶ :
ಪುರುಷರ ವಿಭಾಗದಲ್ಲಿ : ನಿಖಿಲ್ – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ಗುಡ್ಡಪ್ಪ – 61 ಕೆಜಿ ವಿಭಾಗದಲಿ (ತೃತೀಯ), ರಾಕೇಶ್ – 65 ಕೆಜಿ ವಿಭಾಗದಲ್ಲಿ (ಪ್ರಥಮ), ಶಿವರಾಜು – 70 ಕೆಜಿ ವಿಭಾಗದಲ್ಲಿ (ಪ್ರಥಮ), ಸುರೇಂದ್ರ – 74 ಕೆಜಿ ವಿಭಾಗದಲ್ಲಿ (ದ್ವಿತೀಯ), ಚೇತನ್ – 79 ಕೆಜಿ ವಿಭಾಗದಲ್ಲಿ (ಪ್ರಥಮ), ಕೀರ್ತಿ – 86 ಕೆಜಿ ವಿಭಾಗದಲ್ಲಿ (ಪ್ರಥಮ), ಪ್ರಜ್ವಲ್ – 92 ಕೆಜಿ ವಿಭಾಗದಲ್ಲಿ (ಪ್ರಥಮ), ಕಾರ್ತಿಕ್ – 97 ಕೆಜಿ (ಪ್ರಥಮ), ಬಸವರಾಜು – 97+ ಕೆಜಿ ವಿಭಾಗದಲ್ಲಿ (ಪ್ರಥಮ) ಬಹುಮಾನ ಗಳಿಸಿದ್ದಾರೆ.
ಮಹಿಳೆಯರ ವಿಭಾಗದಲ್ಲಿ : ಶಾಮಲ – 50 ಕೆಜಿ ವಿಭಾಗದಲ್ಲಿ (ಪ್ರಥಮ), ಚಂದ್ರಿಕಾ – 53 ಕೆಜಿ ವಿಭಾಗದಲಿ (ಪ್ರಥಮ), ಮನ್ವಿತಾ – 57 ಕೆಜಿ ವಿಭಾಗದಲ್ಲಿ (ತೃತೀಯ), ಚೈತ್ರಾ – 59 ಕೆಜಿ ವಿಭಾಗದಲ್ಲಿ (ಪ್ರಥಮ), ದೀಪಾ – 62 ಕೆಜಿ ವಿಭಾಗದಲ್ಲಿ (ಪ್ರಥಮ), ಮಾನ್ಯ – 65 ಕೆಜಿ ವಿಭಾಗದಲ್ಲಿ (ಪ್ರಥಮ), ನೇಹಾ – 68 ಕೆಜಿ ವಿಭಾಗದಲ್ಲಿ (ಪ್ರಥಮ), ವೈಶಾಲಿ – 72 ಕೆಜಿ ವಿಭಾಗದಲ್ಲಿ (ದ್ವಿತೀಯ), ಧನ್ಯಾ- 76 ಕೆಜಿ ವಿಭಾಗದಲ್ಲಿ (ಪ್ರಥಮ) ಬಹುಮಾನ ಗಳಿಸಿದ್ದಾರೆ.

ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.


administrator