ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ಶೂಟರ್ ಅವನಿ ಲೆಖಾರ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಪ್ಯಾರಾಲಿಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. Avani Lekhara becomes first Indian women to win two gold medals at Paralympics.
ಪುರುಷರ ವಿಭಾಗದಲ್ಲಿ ಜಾವೆಲಿನ್ ಎಸೆತಗಾರ ದೇವೇಂದ್ರ ಜಜಾರಿಯಾ ಪ್ಯಾರಾಲಿಂಪಿಕ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಕಾರು ಅಪಘಾತದಲ್ಲಿ ಕಾಲು ಕಳೆದುಕೊಂಡ ಅವನಿ ಈಗ ವೀಲ್ ಚೇರ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ.
2020 ಟೋಕಿಯೋ ಒಲಿಂಪಿಕ್ಸ್‌ನ ಶೂಟಿಂಗ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಅವನಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳಾ ಪ್ಯಾರಾಲಿಂಪಿಯನ್ ಎಂಬ ಕೀರ್ತಿಗೆ ಪಾತ್ರರಾಗಿದ್ದರು. ಈಗ ಚಿನ್ನದ ಸಾಧನೆಯನ್ನು ಮತ್ತೆ ಮಾಡಿರುವುದು ಹೆಮ್ಮೆಯ ಸಂಗತಿ. ಟೋಕಿಯೋದಲ್ಲಿ 50 ಮೀ. ಏರ್‌ರೈಫಲ್ ವಿಭಾಗದಲ್ಲೂ ಅವನಿ ಕಂಚಿನ ಪದಕ ಗೆದ್ದಿದ್ದರು. ಸಮಗ್ರವಾಗಿ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಚಿನ್ನ ಗೆದ್ದ ಎರಡನೇ ಪ್ಯಾರಾಲಿಂಪಿಯನ್ ಎನಿಸಿದ್ದಾರೆ.
ಭಾರತದ ಮೋನಾ ಅಗರ್ವಾಲ್ ವನಿತೆಯರ ಶೂಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.