ಭಾರತದ ಜೆರ್ಸಿಯಲ್ಲೂ ಪಾಕಿಸ್ತಾನದ ಹೆಸರು ಇರಬಾರದು: ವರದಿ
ಹೊಸದಿಲ್ಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಧರಿಸುವ ಜರ್ಸಿಯಲ್ಲಿ ಆತಿಥೇಯ ರಾಷ್ಟ್ರ ಪಾಕಿಸ್ತಾನದ ಹೆಸರು ಇರಕೂಡದು ಎಂದು ಭಾರತ ಸೂಚಿಸಿರುವುದಾಗಿ ವರದಿಯಾಗಿದೆ. India don’t want the host nation’s (Pakistan) name printed on the jersey.
ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯನ್ನಾಡಲು ಪಾಕಿಸ್ತಾನಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದರಿಂದಾಗಿ ಭಾರತದ ಪಂದ್ಯಗಳನ್ನು ದುಬೈನಲ್ಲಿ ನಡೆಸಲು ತೀರ್ಮಾನಿಸಲಾಯಿತು. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲಿರುವ ತಂಡಗಳ ನಾಯಕರ ಫೋಟೋಗಾಗಿ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನದ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಸುದ್ದಿ ಪ್ರಕಟವಾಗಿತ್ತು. ಆದರೆ ಈ ಬಗ್ಗೆ ಇನ್ನೂ ಬಿಸಿಸಿಐ ಹಸಿರು ನಿಶಾನೆ ತೋರಿಸಿದಂತಿಲ್ಲ. ಅದೇ ರೀತಿ ಉದ್ಘಾಟನಾ ಸಂಮಾರಂಭ ಪಾಕಿಸ್ತಾನದಲ್ಲಿ ನಡೆಯುವುದರಿಂದ ಭಾರತದ ನಾಯಕ ರೋಹಿತ್ ಶರ್ಮಾ ಆ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳುತ್ತಿಲ್ಲ. ಭಾರತ ತಂಡ ಧರಿಸುವ ಜೆರ್ಸಿಯಲ್ಲಿ ಪಾಕಿಸ್ತಾನದ ಹೆಸರು ಕೂಡ ಇರಬಾರದು ಎಂದು ಬಿಸಿಸಿಐ ಹೇಳಿರುವುದಾಗಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಈ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮಧ್ಯಸ್ಥಿಕೆ ವಹಿಸಿ ಈ ರೀತಿಯ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕಾದ ಅಗತ್ಯ ಇದೆ ಎಂದು ಪಿಸಿಬಿಯ ಪದಾಧಿಕಾರಿ ಹೇಳಿದ್ದಾರೆ.
ಫೆಬ್ರವರಿ 19ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭಗೊಳ್ಳಲಿದ್ದು, ಫೆಬ್ರವರಿ 16 ಅಥವಾ 17 ರಂದು ಚಾಂಪಿಯನ್ಷಿಪ್ನ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಪಿಸಿಬಿ ತಿಳಿಸಿದೆ.