ಮುಂಬಯಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮುಗಿಯುತ್ತಿದ್ದಂತೆ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿದೆ. ಈ ಸಂದರ್ಭದಲ್ಲಿ ಭಾರತ ತಂಡವನ್ನು ಕೆ.ಎಲ್, ರಾಹುಲ್ ಮುನ್ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. K L Rahul will lead India in South Africa tour.
ಹಾಲಿ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ಬಯಸಿದ್ದರಿಂದ ಬಿಸಿಸಿಐ ಆಯ್ಕೆ ಸಮಿತಿ ಈ ತೀರ್ಮಾನ ಕೈಗೊಳ್ಳಲಿದೆ. ಈಗಾಗಲೇ ಭಾರತ ತಂಡವನ್ನು ಮುನ್ನಡೆಸಿ ಯಶಸ್ಸು ಕಂಡಿರುವ ರಾಹುಲ್ ಇತ್ತೀಚಿಗೆ ಮುಕ್ತಾಯಗೊಂಡ ವಿಶ್ವಕಪ್‌ನಲ್ಲೂ ತಂಡದ ಪರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
ಭಾರತ ತಂಡ ಡಿಸೆಂಬರ್ 10 ರಿಂದ ಜನವರಿ 7, 2024ರ ಅವಧಿಯಲ್ಲಿ ಮೂರು ಪಂದ್ಯಗಳ ಟಿ20 ಸರಣಿ, ಮೂರು ಪಂದ್ಯಗಳ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದವರು ದಕ್ಷಿಣ ಆಫ್ರಿಕಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಗಾಯಗೊಂಡು ವಿಶ್ರಾಂತಿಯಲ್ಲಿದ್ದ ಆಲ್ರೌಂಡರ್‌ಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ತಂಡಕ್ಕೆ ಮರಳುವ ಸಾಧ್ಯತೆ ಇದೆ. ಇದರಿಂದಾಗಿ ಟಿ20 ಸರಣಿಯಲ್ಲಿ ಆರ್, ಅಶ್ವಿನ್ ಸ್ಥಾನ ಪಡೆಯುವುದು ಸಂಶಯ, ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಏಕದಿನ ಅಥವಾ ಟೆಸ್ಟ್ ಸರಣಿಗೆ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ,
ಕೆಎಲ್ ರಾಹುಲ್ ಏಕದಿನ ಕ್ರಿಕೆಟ್‌ನಲ್ಲಿ ಏಳು ಪಂದ್ಯಗಳಲ್ಲಿ ನಾಯಕತ್ವ ವಹಿಸಿದ್ದು, ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿ ಮೂರು ಪಂದ್ಯಗಳಲ್ಲಿ ಸೋಲನುಭವಿಸಿದ್ದಾರೆ.