Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಮೈಸೂರಿನಲ್ಲಿ ಪ್ಯಾರಾ ಅಥ್ಲೆಟಿಕ್ಸ್‌ ಆಯ್ಕೆ ಟ್ರಯಲ್ಸ್‌

ಬೆಂಗಳೂರು: ಕರ್ನಾಟಕ ರಾಜ್ಯ ದಿವ್ಯಾಂಗರ ಕ್ರೀಡಾ ಸಂಸ್ಥೆಯು ಫೆಬ್ರವರಿ 5 ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ದಲ್ಲಿ 33 ನೇ ರಾಜ್ಯ ಹಿರಿಯರ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ ಹಾಗೂ 23ನೇ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ ಪ್ಯಾರಾ ಅಥ್ಲೀಟ್‌ಗಳಿಗಾಗಿ ಆಯ್ಕೆ ಟ್ರಯಲ್ಸನ್ನು ಆಯೋಜಿಸಿದೆ. Karnataka Stare Para Athletes selection trails for National Para athletic championship will be held on Feb 5 at Mysore

ಕರ್ನಾಟಕ ರಾಜ್ಯ ದಿವ್ಯಾಂಗರ ಕ್ರೀಡಾ ಸಂಸ್ಥೆ ಮತ್ತು ಮೈಸೂರು ಜಿಲ್ಲಾ ದಿವ್ಯಾಂಗರ ಕ್ರೀಡಾ ಸಂಸ್ಥೆ ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆಯ ನೆರವಿನೊಂದಿಗೆ ಈ ಆಯ್ಕೆ ಟ್ರಯಲ್ಸ್‌ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ದಿವ್ಯಾಂಗರ ಕ್ರೀಡಾ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

23 ನೇ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್‌‌ ಚಾಂಪಿಯನ್‌ಷಿಪ್‌ 17-02-2025 ರಿಂದ 20-02-2025 ರವರೆಗೆ ಚೆನ್ನೈನಲ್ಲಿ ನಡೆಯಲಿದೆ. ಈ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಕ್ರೀಡಾಪಟುಗಳನ್ನು ಆಯ್ಕೆ ಮಾಡಲು ದಿನಾಂಕ 05-02-2025 ರ ಭಾನುವಾರದಂದು ಮೈಸೂರಿನ ಚಾಮುಂಡಿ ವಿಹಾರ ಹೊರಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6:30 ರ ವರೆಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ಈ ಆಯ್ಕೆ ಟ್ರಯಲ್ಸ್‌ನಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.]

ಆಯ್ಕೆ ಪ್ರಕ್ರಿಯೆಯು ಭಾರತೀಯ ಪ್ಯಾರಾಲಿಂಪಿಕ್‌ ಸಮಿತಿ (Paralympic Committee of India) ಯ ನಿಯಮಾನುಸಾರ ನಡೆಯಲಿದೆ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ದಿವ್ಯಾಂಗರ ಕ್ರೀಡಾ ಸಂಸ್ಥೆಯ ಅಧ್ಯಕ್ಷ, ಅರ್ಜುನ ಪ್ರಶಸ್ತಿ ವಿಜೇತ ಎಂ. ಮಹದೇವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ರಾಘವೇಂದ್ರ ಎಸ್‌, ಜಿ: 9980861200, ರಾಮಚಂದ್ರ ಆರ್‌. 9886014851, ಪ್ರಭುಸ್ವಾಮಿ 8123040624, ಅವರನ್ನು ಸಂರ್ಕಿಸಬಹುದು.


administrator