ಅಹಮದಾಬಾದ್:
36ನೇ ರಾಷ್ಟ್ರೀಯ ಕ್ರಿಡಾಕೂಟದ ಸ್ಕೇಟಿಂಗ್‌ನಲ್ಲಿ ಕರ್ನಾಟಕದ ಮಹೀನ್ ಟಂಡನ್ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಆರ್ಟಿಸ್ಟಿಕ್ ಸ್ಕೇಟಿಂಗ್‌ನಲ್ಲಿ ಮಹೀನ್ ಅಗ್ರ ಸ್ಥಾನ ಪಡೆದು ಐತಿಹಾಸಿಕ ಚಿನ್ನದ ಪದಕ ಗೆದ್ದರು. ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಸ್ಕೇಟಿಂಗ್ ಕ್ರೀಡೆಗೆ ಅವಕಾಶ ಕಲ್ಪಿಸಲಾಗಿದೆ.
ಆರ್ಟಿಸ್ಟಿಕ್ ಸ್ಕೇಟಿಂಗ್‌ನಲ್ಲಿ ರಾಜ್ಯದ ಕಿರಣ್ ಕುಮಾರ್ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ವನಿತೆಯರ ವಿಭಾಗದಲ್ಲಿ ಸುವರ್ಣಿಕ ಕಂಚಿನ ಪದಕದ ಸಾಧನೆ ಮಾಡಿದ್ದಾರೆ.
ವನಿತೆಯರ ರಿಲೇಯಲ್ಲಿ ಕರ್ನಾಟಕ ಬೆಳ್ಳಿ ಪದಕ ಗೆದ್ದಿದೆ. ಡಾ.ವರ್ಷಾ, ರಿಯಾ ಮತ್ತು ಸುವರ್ಣಿಕ ಅವರನ್ನೊಳಗೊಂಡ ತಂಡ ಮೂರನೇ ಸ್ಥಾನ ಗಳಿಸಿ ರಾಜ್ಯಕ್ಕೆ ಮತ್ತೊಂದು ಬೆಳ್ಳಿ ಪದಕ ನೀಡಿದೆ. ಪುರುಷರ ರಿಲೇ ತಂಡ ಕಂಚಿನ ಪದಕಕ್ಕೆ ತೃಪ್ತಿಪಟ್ಟಿದೆ. ಧನುಷ್, ತೇಜಸ್ವಿ ರಮೇಶ್, ಘನಶ್ಯಾಮ್ ಮತ್ತು ಜೊಹಾನ್ ರಾಜ್ಯ ಪುರುಷರ ತಂಡದಲ್ಲಿದ್ದಾರೆ.
ರಾಜ್ಯಕ್ಕೆ ಹೆಮ್ಮೆ: ರಾಷ್ಟ್ರೀಯ ಕ್ರೀಡಾಕೂಟದ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಕೇಟಿಂಗ್ ಕ್ರೀಡೆಯನ್ನು ಅಳವಡಿಸಲಾಗಿದೆ. ಕರ್ನಾಟಕ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಬಗ್ಗೆ ಕರ್ನಾಟಕ ರೋಲರ್ ಸ್ಕೇಟಿಂಗ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಂದೂಧರ ಸೀತಾರಾಮ್ ಅವರು ಪ್ರತಿಯೊಬ್ಬ ಸ್ಕೇಟರ್‌ಗೂ ಅಭಿನಂದನೆ ಸಲ್ಲಿಸಿದ್ದಾರೆ.
“ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಸ್ಕೇಟಿಂಗ್ ಕ್ರೀಡೆಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ರಾಜ್ಯದ ತಂಡಕ್ಕೆ ಸ್ಪರ್ಧಿಸಲು ಅವಕಾಶ ನೀಡಿರುವ ಕರ್ನಾಟಕ ರಾಜ್ಯ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷ ಕೆ. ಗೋವಿಂದ ರಾಜ್ ಅವರಿಗೆ ಧನ್ಯವಾದಗಳು. ಡಿಸೆಂಬರ್‌ನಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್‌ಷಿಪ್ ನಡೆಯಲಿದೆ. ರಾಷ್ಟ್ರೀಯ ಕ್ರೀಡಾಕೂಟದಲ್ಲಿ ತೋರಿದ ಸಾಧನೆ ಮನೆಯಂಗಣದಲ್ಲಿ ನಡೆಯಲಿರುವ ಚಾಂಪಿಯನ್‌ಷಿಪ್‌ನಲ್ಲಿ ಉತ್ತಮ ಪ್ರದರ್ಶನ ತೋರಲು ಸ್ಫೂರ್ತಿಯಾಗಲಿದೆ. ನಾವು ಚಾಂಪಿಯನ್ ಪಟ್ಟ ಗೆಲ್ಲುತ್ತೇವೆಂಬ ಆತ್ಮವಿಶ್ವಾಸವಿದೆ,” ಎಂದು ಇಂದೂಧರ್ ತಿಳಿಸಿದರು.