ಕರ್ನಾಟಕ ವಿರುದ್ಧದ ರಣಜಿ ಪಂದ್ಯದಲ್ಲಿ ಆಡಲಿದ್ದಾರೆ ಶುಭ್ಮನ್ ಗಿಲ್
ಬೆಂಗಳೂರು: ಜನವರಿ 23ರಿಂದ ಆರಂಭಗೊಳ್ಳಲಿರುವ ಕರ್ನಾಟಕ ವಿರುದ್ಧದ ರಣಜಿ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರ ಶುಭ್ಮನ್ ಗಿಲ್ ಪಂಜಾಬ್ ಪರ ಆಡಲಿದ್ದಾರೆ. ಪಂಜಾಬ್ ಕ್ರಿಕೆಟ್ ಸಂಸ್ಥೆ ಪ್ರಕಟಿಸಿರುವ 15 ಆಟಗಾರರ ಪಟ್ಟಿಯಲ್ಲಿ ಗಿಲ್ ಅವರ ಹೆಸರು ಸೇರ್ಪಡೆಗೊಂಡಿದೆ. Shubman Gill will paly Rajni Match against Karnataka.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಅಂತಾರಾಷ್ಟ್ರೀಯ ಆಟಗಾರರಿಗೆ ಮುಂಬರುವ ರಣಜಿ ಪಂದ್ಯಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಆಟಗಾರರು ಆಯಾಯ ತಂಡಗಳಲ್ಲಿ ಆಡಲಿದ್ದಾರೆ.
ಕರ್ನಾಟಕದ ಆಲೂರಿನಲ್ಲಿ 2022ರಲ್ಲಿ ಮಧ್ಯಪ್ರದೇಶದ ವಿರುದ್ಧ ಕ್ವಾರ್ಟರ್ ಫೈನಲ್ ಪಂದ್ಯ ಆಡಿದ ನಂತರ ಗಿಲ್ ಮತ್ತೆ ರಣಜಿ ಆಡಿರಲಿಲ್ಲ. ಗಿಲ್ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿದ್ದು ಆಡಿರುವ ಮೂರು ಪಂದ್ಯಗಳಲ್ಲಿ ಒಟ್ಟು 93 ರನ್ ಗಳಿಸಿರುತ್ತಾರೆ.