Saturday, April 20, 2024

ಸಿಂಧು ಮುಡಿಗೆ ಚೊಚ್ಚಲ ವಿಶ್ವ ಬ್ಯಾಡ್ಮಿಂಟನ್‌ ಫೈನಲ್ಸ್‌ ಕಿರೀಟ

ಗುವಾಂಗ್ ಝೌ:

ಭಾರತದ ಸ್ಟಾರ್‌ ಆಟಗಾರ್ತಿ ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್‌ ಫೈನಲ್ಸ್ ನ ಮಹಿಳಾ ಸಿಂಗಲ್ಸ್‌ ಅಂತಿಮ ಹಣಾಹಣಿಯಲ್ಲಿ ನಜೋಮಿ ಒಕುರುವಾ ಅವರನ್ನು ಮಣಿಸುವ ಮೂಲಕ ಚಾಂಪಿಯನ್‌ ಪಟ್ಟ ಅಲಂಕರಿಸಿದರು.

ಆ ಮೂಲಕ ಅವರು ಬಿಡಬ್ಲ್ಯುಎಫ್‌ ವಿಶ್ವ ಟೂರ್‌ ಫೈನಲ್ಸ್‌ ಗೆದ್ದ ಮೊದಲ ಭಾರತದ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದರು.

ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ 62 ನಿಮಿಷಗಳಲ್ಲಿ ಅಮೋಘ ಪ್ರದರ್ಶನ ನೀಡಿದ ಒಲಿಂಪಿಕ್‌ ಬೆಳ್ಳಿ ಪದಕ ವಿಜೇತೆ ಸಿಂಧು, ಜಪಾನ್‌ನ ಒಕುರುವಾ ಅವರನ್ನು 21-19, 21-17 ಅಂತರದಲ್ಲಿ ಸೋಲಿಸುವಲ್ಲಿ ಯಶಸ್ವಿಯಾದರು. ಕಳೆದ ವರ್ಷ ಇವರು ಇದೇ ಹಂತದಲ್ಲಿ ಸೋತು ರನ್ನರ್‌ ಅಪ್‌ಗೆ ತೃಪ್ತರಾಗಿದ್ದರು. ಆ ಮೂಲಕ ಅವರು ಪ್ರಸಕ್ತ ವರ್ಷದಲ್ಲಿ ಮೊದಲ ಬಾರಿ ಚಾಂಪಿಯನ್‌ ಆದರು.

6ನೇ ಶ್ರೇಯಾಂಕದ ಪಿ.ವಿ. ಸಿಂಧು ಅವರು ಪ್ರಸಕ್ತ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಸೆಮಿಫೈನಲ್‌ನಲ್ಲಿ ರಿಯೋ ಒಲಿಂಪಿಕ್‌ ಬೆಳ್ಳಿ ಪದಕ ವಿಜೇತೆ ಥಾಯ್‌ಲೆಂಡ್‌ನ ರಾತ್ನೋಕ್‌ ಇನ್ತೆನೊನ್‌ ಅವರ ವಿರುದ್ಧ ಜಯ ಸಾಧಿಸಿದ್ದರು.

Related Articles