ಎಲ್ಲಿದ್ದಾನೆ IIT ಬಾಬಾ? ಪಾಕ್ ವಿರುದ್ಧ ಭಾರತಕ್ಕೆ ಜಯ
ದುಬೈ: ದುಬೈ ಇಂಟರ್‌ನ್ಯಾಷನಲ್ ಕ್ರಿಕೆಟ್ ಅಂಗಣದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ವಿರಾಟ್ ಕೊಹ್ಲಿ ಅವರ ಅಜೇಯ 100 ರನ್ ನೆರವಿನಿಂದ 6 ವಿಕೆಟ್ ಅಂತರದಲ್ಲಿ ಜಯ ಗಳಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸತತ ಎರಡನೇ ಜಯ ಸಾಧಸಿದೆ. Where is IIT Baba Indian beat Pakistan by 6 wickets in Champions Trophy.
ಟಾಸ್ ಗೆದ್ದು ಪಾಕಿಸ್ತಾನ ಬ್ಯಾಟಿಂಗ್ ಆಯ್ದುಕೊಂಡು 49.4 ಓವರ್‌ಗಳಲ್ಲಿ 241 ರನ್ ಗಳಿಸಿತ್ತು. ಭಾರತ 42.3 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು 244 ರನ್ ಗಳಿಸಿತು. ಭಾರತದ ಪರ ವಿರಾಟ್ ಕೊಹ್ಲಿ 100 ರನ್ ಗಳಿಸಿ ಅಂತಾರಾಷ್ಟ್ರೀಯ ಏಕದಿನದಲ್ಲಿ 51ನೇ ಶತಕ ಪೂರ್ಣಗೊಳಿಸಿದರು. ಕೊಹ್ಲಿ 111 ಎಸೆತಗಳನ್ನೆದುರಿಸಿ 7 ಬೌಂಡರಿ ನೆರವಿನಿಂದ ಅಜೇಯ 100 ರನ್ ಗಳಿಸಿ ಜಯದ ರೂವಾರಿ ಎನಿಸಿದರು. ಭಾರತದ ಪರ ರೋಹಿತ್ ಶರ್ಮಾ (20), ಶುಭ್ಮನ್ ಗಿಲ್ (46) ಹಾಗೂ ಶ್ರೇಯಸ್ ಅಯ್ಯರ್ (56) ರನ್ ಗಳಿಸಿ ಭಾರತದ ಜಯದಲ್ಲಿ ಪ್ರಮುಖ ಪಾತ್ರವಹಿಸಿದರು. ವಿರಾಟ್ ಕೊಹ್ಲಿ ಇದೇ ವೇಳೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 14,000 ರನ್ ಪೂರ್ಣಗೊಳಿಸಿದರು.
ಕುಂಭ ಮೇಳದ ಮೂಲಕ ಬೆಳಕಿಗೆ ಬಂದ IIT ಬಾಬಾ ಯಾನೇ ಅಬೇ ಸಿಂಗ್ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲುತ್ತದೆ ಎಂದು ಹೇಳಿದ್ದ, ಈಗ ಬಾಬಾ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.